ಪುಲ್ವಾಮ ದಾಳಿ ನಡೆದು ವರ್ಷ ಸಂದಿದೆ. ಉಗ್ರರ ದಾಳಿಗೆ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರಿಗೆ ಜೈ ಹಿಂದ್….
ಅಂದು 2019ರ ಫೆಬ್ರವರಿ 14. ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಉಗ್ರನೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿ, 40 ಜನ ಸೈನಿಕರು ಹುತಾತ್ಮರಾಗಿದ್ದರು. ಉತ್ತರ ಪ್ರದೇಶದ ಒಟ್ಟು 12 ಯೋಧರು. ರಾಜಸ್ತಾನದ 5, ಪಂಜಾಬ್ ನ 4, ಪಶ್ಚಿಮ ಬಂಗಾಳದ 2 , ಒಡಿಶಾದ 2, ಉತ್ತರಾಖಂಡದ 2, ಬಿಹಾರದ 2, ಮಹಾರಾಷ್ಟ್ರ 2, ತಮಿಳುನಾಡಿನ 2, ಅಸ್ಸಾಂ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಕೇರಳ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಕರ್ನಾಟಕದ ತಲಾ ಓರ್ವ ಯೋಧರು ಹುತಾತ್ಮರಾಗಿದ್ದರು. ರಾಜ್ಯದ ಮಂಡ್ಯ ಜಿಲ್ಲೆಯ ಎಚ್.ಗುರು (33) ಯೋಧ ಹುತಾತ್ಮರಾಗಿದ್ದರು.
ಪುಲ್ವಾಮಾ ಜಿಲ್ಲೆಯ ಆವಂತಿಪೋರ್ ಪ್ರದೇಶ ಅದು. ವಾಹನದಲ್ಲಿ ಸೈನಿಕರು ಸಾಗುತ್ತಿದ್ದ ವೇಳೆ ಅಪಾರ ಪ್ರಮಾಣದ ಸ್ಫೋಟಕ ತುಂಬಿಕೊಂಡು ಬಂದಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಆದಿಲ್ ಅಹ್ಮದ್ ಎಂಬಾತ ಸೈನಿಕರ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದು 40 ಯೋಧರ ಸಾವಿಗೆ ಕಾರಣನಾದ. ಒಟ್ಟು 70 ಆರ್ಮಿ ಟ್ರಕ್ ಗಳಲ್ಲಿ 2500 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದರು.
ಬಳಿಕ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತವು ಫೆ. 26 ರಂದು ಬಾಲಾಕೋಟ್ ಪ್ರದೇಶದಲ್ಲಿದ್ದ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಪರಿಣಾಮ ಅಪಾರ ಸಂಖ್ಯೆಯಲ್ಲಿ ಜೈಶ್ ಜೈಷ್-ಎ-ಮೊಹಮ್ಮದ್ ಸಂಘಟನೆಯ 300 ಕ್ಕೂ ಹೆಚ್ಚು ಉಗ್ರಗಾಮಿಗಳು ಸತ್ತಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಪುಲ್ವಾಮ ದಾಳಿಗೆ ವರ್ಷ ಸಂದಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…