ನವದೆಹಲಿ: ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿಗಳು ಯೋಧರ ತ್ಯಾಗ ಮತ್ತು ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.
019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…