ಮಂಗಳೂರು: ಪೆಟ್ರೋಲ್ ಡೀಸೆಲ್ ದರವನ್ನು ವಿಪರೀತವಾಗಿ ಏರಿಸಿ, ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಪ್ರತಿಭಟನಾ ಪ್ರದರ್ಶನವನ್ನುಸಿಪಿಐಎಂ ದ.ಕ.ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಉದ್ಘಾಟಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆಗಳು ಪಾತಾಳಕ್ಕೆ ಕುಸಿದಿದ್ದರೂ ನಮ್ಮ ದೇಶದಲ್ಲಿ ತೈಲ ಬೆಲೆಗಳು ಮಾತ್ರ ಒಂದೇ ಸಮನೆ ಏರುತ್ತಿದೆ.ಇದರಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಜನಸಾಮಾನ್ಯರ ಬದುಕಿಗೆ ನೇರವಾಗಿ ದುಷ್ಪರಿಣಾಮ ಬೀರಲಿದೆ.ಕೋರೋನಾ ಸಂಕಷ್ಟದ ಈ ಕಾಲದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.
ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು. ಯುವನಾಯಕರಾದ ಸಂತೋಷ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಭಟನೆಯಲ್ಲಿ ನಾಯಕರಾದ ವಾಸುದೇವ ಉಚ್ಚಿಲ್, ಡಿವೈ ಎಫ್ ಐ ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ, ಮಂಗಳೂರು ನಗರ ಮುಖಂಡರಾದ ಸುರೇಶ್ ಬಜಾಲ್, ದಿನೇಶ್ ಶೆಟ್ಟಿ, ಸಿಐಟಿಯು ನಾಯಕರಾದ ಸ್ಟಾನ್ಲಿ ನೊರೋನ್ಹಾ, ಅನ್ಸಾರ್, ಸಂತೋಷ್ ಆರ್.ಎಸ್, ಹರೀಶ್ ಪೂಜಾರಿ, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ಪ್ರಶಾಂತ್ ಉರ್ವಾಸ್ಟೋರ್, ರಘುವೀರ್, ಕೃಷ್ಣ ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement