ಬೆಳ್ಳಾರೆ : ಮುಕ್ಕೂರು ಪೆರುವಾಜೆ ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.
ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.
ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.
ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.
ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…