Advertisement
ನಮ್ಮೂರ ಸುದ್ದಿ

ಪೆರುವೋಡಿ : ಅಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Share

ಬೆಳ್ಳಾರೆ : ಮುಕ್ಕೂರು ಪೆರುವಾಜೆ  ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ  ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.

ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.

ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.

ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.

ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 hour ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

6 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

23 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago