ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಜ.30 ರಂದು ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು. ಪೂರ್ವಾಹ್ನ ವಿಷ್ಣುಪ್ರಿಯಾ ಮಹಿಳಾ ಭಜನ ಮಂಡಳಿ ಬೆಳಂದೂರು ವಲಯ ಇವರಿಂದ ಭಜನ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆಯಿತು. ಅನಂತರ ಗುಳಿಗ, ಪಂಜುರ್ಲಿ ನೇಮ, ಜ.31 ರಂದು ಬೆಳಗ್ಗೆ ಶಿರಾಡಿ ದೈವ ನೇಮ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಎಂ.ಕೆ.ಬಾಲಚಂದ್ರ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತಿರುಮಲೇಶ್ವರ ಭಟ್ ಕಾನಾವು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ರೈ ಕುಂಜಾಡಿ, ಉತ್ಸವ ಸಮಿತಿ ಅಧ್ಯಕ್ಷ ಬಿ.ಜಿ.ಭಾಸ್ಕರ ರೈ, ದಯಾನಂದ ಕಾನಾವುಜಾಲು, ಮೊಕ್ತೇಸರರಾದ ಕುಂಬ್ರ ದಯಾಕರ ಆಳ್ವ, ಗೋಪಾಲಕೃಷ್ಣ ಭಟ್ ಕಾನಾವು, ವಸಂತ ಬೈಪಡಿತ್ತಾಯ ಮುಕ್ಕೂರು, ಕುಶಾಲಪ್ಪ ಗೌಡ ಪೆರುವಾಜೆ, ಅರ್ಚಕ ಸುರೇಶ ಉಪಾಧ್ಯಾಯ, ಸುಜಾತ ವಿ.ರಾಜ್.ಕಜೆ, ಪುಷ್ಪಾವತಿ ಎಂ.ಕಂಡಿಪ್ಪಾಡಿ, ರಾಮಚಂದ್ರ ಕೋಡಿಬೈಲು, ಉಮೇಶ್ ಕೆಎಂಬಿ ಮತ್ತು ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…