ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು.
ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜ, ಉಪಾಧ್ಯಕ್ಷರಾದ ಆರ್ ಕೆ ಬಲ್ಲಾಳ್, ವಲಯ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸದಸ್ಯರಾದ ಈಶ್ವರ ನಾಯಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆಗಳನ್ನು ಹಸ್ತಾಂತರಿಸಿದರು. ನೌಕರರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಬ್ಯಾಂಕ್ ನೌಕರರ ಸಂಘ ಆಯೋಜಿಸುತ್ತಿರುವುದನ್ನು ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜಾರವರು ಪ್ರಸ್ತುತಪಡಿಸಿದರು. ಸಂಘದ ಪದಾಧಿಕಾರಿಗಳು ಸಂದರ್ಭೋಚಿತವಾಗಿ ಹಿತ ನುಡಿದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಕೆಆರ್ ಗೋಪಾಲಕೃಷ್ಣ ವಹಿಸಿದ್ದರು. ಮುಖ್ಯಗುರುಗಳಾದ ಪಿ ಶ್ರೀಕೃಷ್ಣರವರು ವಂದಿಸಿದರು. 2000 ಲಿಟರ್ ನ ನೀರಿನ ಟ್ಯಾಂಕ್, ಬಣ್ಣದ ಮುದ್ರಣ ಸಮೇತ ಕಂಪ್ಯೂಟರ್, ಕುಡಿಯುವ ನೀರಿನ ಫಿಲ್ಟರ್ ಗಳನ್ನು ಸಂಸ್ಥೆಯ ಮುಖ್ಯಸ್ಥರು ಅಧ್ಯಾಪಕ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ನಾಯಕರು ಸ್ವೀಕರಿಸಿದರು. ಉಪನ್ಯಾಸಕ ಮಂಟಯ್ಯ ಕಾರ್ಯಕ್ರಮ ನಿರೂಪಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.