ಉಡುಪಿ: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿ.20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…