ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆ

December 25, 2019
4:01 PM

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ‌. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು. ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ‌ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ‌ ಎಂದು ಅವಿನಾಶ್ ವಿವರಿಸಿದರು. ಶ್ರೀಗಳಿಗೆ ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.

ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ‌.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ‌ ನಡೆಯುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror