ಮಂಗಳೂರು: ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಡಿ.20 ರಂದು ಬೆಳಿಗ್ಗೆ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುರ್ತುನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ಸಮಸ್ಯೆಉಂಟಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.
ಉತ್ತರ ಭಾರತ, ತಿರುಪತಿ, ಚೆನ್ನೈ ಪ್ರವಾಸ ಕೈಗೊಂಡು ಡಿ.19 ರಂದು ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ನಂತರ ಉಡುಪಿಗೆ ತೆರಳಿದ್ದು ಡಿ.20 ರಂದು ಮುಂಜಾನೆ ಉಸಿರಾಟದ ತೊಂದರೆಯುಂಟಾಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಪ್ರಮುಖರು ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದು ಭೇಟಿ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ಉಡುಪಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…