ಸುಳ್ಯ: ಮಂಡೆಕೋಲು ಗ್ರಾಮದ ಪೇರಾಲು ಮೈತ್ತಡ್ಕ ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ರಜತ ಸಂಭ್ರಮ ಡಿ.29, ಜನವರಿ 4 ಮತ್ತು 5 ರಂದು ಪೇರಾಲು ಮೈತ್ತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಂಜುನಾಥ ಪೇರಾಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ.29 ರಂದು ಕ್ರೀಡಾಕೂಟ ನಡೆಯಲಿದೆ. ಪೂ10 ರಿಂದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ. ಸಂಜೆ 6ರಿಂದ 65 ಕೆ.ಜಿ.ಒಳಗಿನ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ. ಜ.4ರಂದು ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.5ರಂದು ಬೆಳಿಗ್ಗೆ 9 ರಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ಸಂಜೆ 6ರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ರಾತ್ರಿ ಎಂಟರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕ ಎಸ್.ಅಂಗಾರ ಉದ್ಘಾಟಿಸುವರು. ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ, ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಸುಂದರ ಗೌಡ ಕಾಡುಸೊರಂಜ, ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ಕಾರ್ಯದರ್ಶಿ ದಿವಾಕರ ಶಿರಾಜೆ, ಯಾಹ್ಯಾ ಎಂ.ಬಿ, ಪ್ರಕಾಶ್ ಕಾಡುಸೊರಂಜ ಉಪಸ್ಥಿತರಿದ್ದರು
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…