ಬೆಂಗಳೂರು:ಪೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ಮಂಗಳವಾರ ರಾತ್ರಿ ಗಲಭೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ ಪೊಲೀಸರು ಮತ್ತು ಉದ್ರಿಕ್ತರ ನಡುವಿನ ಘರ್ಷಣೆ , ಗೊಲೀಬಾರ್ ಗೆ 3 ಮಂದಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂದಿಸಿ 110 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ನನ್ನು ದಸ್ತಗಿರಿ ಮಾಡಲಾಗಿದೆ. ಪೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿ ಗಲಭೆ ನಡೆಸಿದ ಹಾಗೂ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಲ್ ಪಂತ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಆರೋಪಿ ನವೀನ್ ಎಂಬಾತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ್ದಾರೆ ಎಂದು ಗಲಭೆ ಆರಂಭವಾಗಿತ್ತು. ನವೀನ್ ಎಂಬವರು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ಎನ್ನುವ ನೆಪ ಇಟ್ಟು ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿತ್ತು.
ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣ ತರಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಗೋಲಿಬಾರ್ ನಡೆಸಿದರು. ಕಿಡಿಗೇಡಿಗಳು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಹಲವಾರು ವಾಹನಗಳು ಸುಟ್ಟು ಭಸ್ಮವಾಗಿದೆ. ಕೆಲವೇ ಕೆಲವು ಸಮಯದಲ್ಲಿ ಪರಿಸ್ಥಿತಿ ಕೈ ಮೀರಿ ಹೋಯಿತು. ಹಲವಾರು ದ್ವಿಚಕ್ರ ವಾಹನಗಳು, ಹಲವಾರು ಮನೆಗಳು ಹಾನಿಗೊಳಗಾಗಿವೆ.
ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‍ಡಿಪಿಐ ಮುಖಂಡನನ್ನು ಬಂಧಿಸಲಾಗಿದೆ.
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…