ಸುಳ್ಯ: ಪೈಂಬೆಚ್ಚಾಲು ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸಾ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯವು ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್ ರವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ನಡೆಯಿತು.
ಸ್ವಲಾತ್ ಮಜ್ಲಿಸ್ ನ ನೇತೃತ್ವ ಹಾಗು ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸ ಕಟ್ಟಡದ ಶಿಲನ್ಯಾಸವನ್ನು ದ.ಕ.ಜಿಲ್ಲಾ ಖಾಝಿ ಸಯ್ಯಿದ್ ಕೂರತ್ ತಙಳ್ ರವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ, ಫಾರೂಖ್ ಮದನಿ,ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಪಿ.ಎಂ.ಮೂಸ ಹಾಜಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸಾನ್ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಹಾಗು ಎಸ್ಸೆಸ್ಸೆಫ್, ಎಮ್ ವೈಎಸ್ ನಾಯಕರೂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಯವರಿಗೆ ಜಮಾಅತ್ ವತಿಯಿಂದ ಶಾಲು ಹೊದಿಸಿ ಬೀಳ್ಕೊಡುಗೆ ಮಾಡಲಾಯಿತು. ಬಿ.ಯಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ವಂದಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.