ಪೈಲಾರು: ಪೈಲಾರಿನ ಫೆಂಡ್ಸ್ ಕ್ಲಬ್ ವತಿಯಿಂದ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಇಲ್ಲಿನ ಸಹಿಪ್ರಾ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾ ಅಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೃಷ್ಣಪ್ರಸಾದ್ ಮಾಡಬಾಕಿಲು ಗಿಡ ನೆಡುವುದರ ಮೂಲಕ ವೃಕ್ಷಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಪರಿಸರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ನಾರಾಯಣ ಕಂಜರ್ಪಣೆ ಸ್ವಾಗತಿಸಿ, ಶ್ರವಣ್ ಕೋಡ್ತುಗುಳಿ ವಂದಿಸಿದರು. ಕಾರ್ಯದರ್ಶಿ ಮನೋಜ್ಞಾ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel