(ಇಂಟರ್ನೆಟ್ ಚಿತ್ರ )
ಮಂಗಳೂರು: ಪೌರತ್ವ ಕಾಯಿದೆ ಹಾಗೂ ಎನ್ ಸಿ ಆರ್ ವಿರುದ್ಧ ಮಂಗಳೂರಿನಲ್ಲಿ ಸೆಕ್ಷನ್ ಜಾರಿ ನಡುವೆಯೇ ನಡೆದ ಪ್ರತಿಭಟನೆಯಲ್ಲಿ 6 ಮಂದಿ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ.
ಸೆಕ್ಷನ್ ನಡುವೆಯೂ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು, ತಕ್ಷಣವೇ ಪೊಲೀಸರು ಹಿಂಸಾಚಾರ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಆದರೆ ಮುಖಕ್ಕೆ ಬಟ್ಟೆಕಟ್ಟಿಕೊಂಡು ಹಲವಾರು ಮಂದಿ ಪೊಲೀಸರಿಗೆ ಕಲ್ಲು ಎಸೆದು ಗಾಯವಾಯಿತು. ತಕ್ಷಣವೇ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಲಭೆ ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು.
ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ್ದರಿಂದ ಗಾಳಿಯಲ್ಲಿ ಗುಂಡು ಸಿಡಿಸಿದ್ದಾರೆ. ಪ್ರತಿಭಟನಾಕಾರರು ಕಟ್ಟಡದಲ್ಲಿ ಸೇರಿಕೊಂಡಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಧರಣಿ ವೇಳೆ 40 ಕ್ಕೂ ಹೆಚ್ಚು ಪೊಲೀಸರಿಗೆ ಹಾಗೂ ಪ್ರತಿಭಟನಾಕಾರರಿಗೆ ಗಾಯಗಳಾಗಿವೆ. ಈ ಸಂದರ್ಭ ಗಾಯಗೊಂಡ ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ.
ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ. ನೂರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.
ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…