ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲೂ ಅಂಗೀಕಾರ

December 11, 2019
10:09 PM

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.

ರಾಜ್ಯಸಭೆಯಲ್ಲಿ ಸತತ ಏಳುಗಂಟೆ ಚರ್ಚೆ ನಡೆದ ಬಳಿಕ ಬಿಲ್​ ಪಾಸ್​ ಆಗಿದೆ. ಮುಂದಿನ ಹಂತದಲ್ಲಿ ರಾಷ್ಟ್ರಪತಿಯಿಂದ ಮಸೂದೆಗೆ ಅಂಕಿತ ದೊರೆತ ಕೂಡಲೇ ಕಾಯ್ದೆಯಾಗಿ ಪರಿವರ್ತನೆಯಾಗಲಿದೆ. ಪೌರತ್ವ ತಿದ್ದುಪಡಿ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳಿಸಲು ವಿರೋಧಿಸಿ 124 ಎಂಪಿಗಳು ಹಾಗೂ ಕಳಿಸಬೇಕು ಎಂದು ಪರವಾಗಿ 99 ಎಂಪಿಗಳು ಮತ ಚಲಾಯಿಸಿದರು. ಹಾಗಾಗಿ ಮಸೂದೆ ಆಯ್ಕೆ ಸಮಿತಿಗೆ ಕಳಿಸುವುದನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಲಾಯಿತು.

ಇಂದು ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್​ ಷಾ ಅವರು ಮಸೂದೆ ಮಂಡನೆ ಮಾಡಿದರು. ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ವಿರೋಧಿಸಿದವು. ಬಿಲ್​ ಮಂಡನೆಗೂ ಮೊದಲಿನಿಂದಲೇ ಈಶಾನ್ಯ ಭಾರತದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ಲೋಕಸಭೆಯಲ್ಲಿ ಬಿಲ್​ ಮಂಡನೆಯಾದ ಬಳಿಕ 12 ತಾಸು ಚರ್ಚೆ ನಡೆದಿತ್ತು. ಕೊನೆಗೂ ಬಿಲ್​ ಪರವಾಗಿ 311 ಸಂಸದರು, ವಿರೋಧವಾಗಿ 80 ಮಂದಿ ಮತ ಹಾಕುವ ಮೂಲಕ ಮಸೂದೆ ಅಂಗೀಕಾರವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror