Advertisement

ಪ್ರಕೃತಿ ವಿಕೋಪ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಲು ಕರೆ

Share

ಸುಳ್ಯ:  ಅತಿವೃಷ್ಠಿ, ಪ್ರಕೃತಿ ವಿಕೋಪ ಉಂಟಾದಲ್ಲಿ ಅದನ್ನು ಎದುರಿಸಲು ತಾಲೂಕು ಆಡಳಿತ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ.

ಅಂತಹಾ ಸಂದರ್ಭದಲ್ಲಿ ಯುವಕರು, ವಿವಿಧ ಸಂಘಟನೆಗಳ ಸದಸ್ಯರು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಹೇಳಿದ್ದಾರೆ.

ಪ್ರಕೃತಿ ವಿಕೋಪ ರಕ್ಷಣೆ ಕುರಿತು ಚರ್ಚಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ರಕ್ಷಣಾ ಕಾರ್ಯದಲ್ಲಿ ಪರಿಣತಿ ಹೊಂದಿರುವ ಯುವಕರು ರಕ್ಷಣಾ ತಂಡದೊಂದಿಗೆ ಸೇರಿ ಕಾರ್ಯನಿರ್ವಹಿಸಬೇಕು. ಪ್ರತಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದ್ದು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಲಾಗುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು ಎಂದರು. ಮುಂಜಾಗ್ರತಾ  ಕ್ರಮವಾಗಿ ಕಲ್ಲುಗುಂಡಿ ಮತ್ತು ಕೊಲ್ಲಮೊಗ್ರ ದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ತೆರೆಯಲಾಗಿದೆ. ಯಾವುದಾದರು ಕುಟುಂಬಗಳಿಗೆ ತೊಂದರೆ ಉಂಟಾದರೆ ಅವರನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು. ವಿಪತ್ತು ನಿರ್ವಹಣೆಗೆ ಅಗತ್ಯ ಸಲಕರಣೆಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯಾವುದೇ ರೀತಿಯ ಸಮಸ್ಯೆಗಳು ಉಂಟಾದರೆ ಕೂಡಲೇ ಮಾಹಿತಿ ನೀಡಬೇಕು ಮತ್ತು ಮಳೆಗಾಲ ಕಳೆಯುವ ತನಕ ಜಾಗೃತರಾಗಿರುವಂತೆ ಎಂದು ಎಸ್‌ ಐ ಎಂ.ಆರ್.ಹರೀಶ್ ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ,
ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಮೆಸ್ಕಾಂ ಇಂಜಿನಿಯರ್ ಸುಪ್ರೀತ್, ಗೃಹರಕ್ಷಕ ದಳದ ಕಮಾಂಡೆಂಟ್ ಜಯಂತ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ, ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್, ವಕೀಲ ಕೆ
ಎಲ್.ಪ್ರದೀಪ್ ಕುಮಾರ್ ಮತ್ತಿತರರು ಮಾತನಾಡಿದರು.

ನಗರ ಪಂಚಾಯತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago