Advertisement
ಸುದ್ದಿಗಳು

ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ವಿಧಿವಶ

Share

ಮಂಗಳೂರು:ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (69) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ ಗ್ರೇಡ್ ಶ್ರೇಣಿಯ ಕಲಾವಿದರಾಗಿದ್ದರು.
ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ, ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

1994 ರಲ್ಲಿ ಲಂಡನ್‌ನ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ನಡೆದ ಬಿಬಿಸಿ ವಾಯುವಿಹಾರ ಸಂಗೀತ ಕಚೇರಿಗೆ ಆಹ್ವಾನಿಸಲ್ಪಟ್ಟ ಮೊದಲ ಕರ್ನಾಟಕ ಸಂಗೀತಗಾರ ಎಂಬ ಹೆಗ್ಗಳಿಕೆ ಅವರದ್ದು.ಪ್ರವೀಣ್ ಘೋಲ್ಕಿಂಡಿ ಅವರ ಜೊತೆಗೆ ಜುಗಲ್ಬಂಧಿಯಾಗಿ ಕದ್ರಿ ನೀಡುತ್ತಿದ್ದ ರಾಗ್ ರಂಗ್ ಅತ್ಯಂತ ಯಶಸ್ವೀ ಕಾರ್ಯಕ್ರಮಗಳಲ್ಲೊಂದು.

ಮೃತರು ಪತ್ನಿ, ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago