ಪ್ರಚಾರಕ್ಕಾಗಿ ವಿರೋಧ ಪಕ್ಷವಾಗಿರದೇ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿ- ಕಾಂಗ್ರೆಸ್‍ಗೆ ಬಿಜೆಪಿ ಟಾಂಗ್

June 28, 2019
9:54 PM

ಸುಳ್ಯ: ಸುಳ್ಯ ನಗರ ಪಂಚಾಯತ್‍ನಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಒಳ್ಳೆಯ ಕೆಲಸ ಮಾಡುತ್ತಾರೆ ಎನ್ನುವ ಕಾರಣಕ್ಕೆ ಜನರು ಮತ ನೀಡಿ ಆಯ್ಕೆ ಮಾಡಿದ್ದಾರೆ. ಆದರೆ ಜನತೆ ಕೊಟ್ಟ ತೀರ್ಮಾನವನ್ನು ಕಾಂಗ್ರೆಸ್ ಪ್ರಶ್ನೆ ಮಾಡುವ ಮೂಲಕ ಮತದಾರರನ್ನು ಅವಮಾನ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರಚಾರಕ್ಕಾಗಿ ವಿರೋಧ ಪಕ್ಷದ ಕೆಲಸ ಮಾಡುವುದು ಬೇಡ ಬದಲಾಗಿ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿ ಎಂದು ಸುಳ್ಯ ನಗರ ಬಿಜೆಪಿ ಅಧ್ಯಕ್ಷ ಹಾಗೂ ನಗರ ಪಂಚಾಯತ್ ಸದಸ್ಯ ವಿನಯ ಕುಮಾರ್ ಕಂದಡ್ಕ ಹೇಳಿದ್ದಾರೆ.

Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಸುಳ್ಯ ನಗರ ಪಂಚಾಯತ್‍ನಲ್ಲಿ ಕೆಲಸ ಮಾಡುವರರು ಯಾರು ಎಂದು ನಗರದ ಜನತೆಗೆ ಗೊತ್ತಿರುವ ಕಾರಣ ಸತತ ಮೂರು ಅವಧಿಯ ನಗರ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದರು. ಈ ಬಾರಿ ಮತ್ತೆ ಬಿಜೆಪಿಗೆ ಬೆಂಬಲ ಕೊಡುವ ಮೂಲಕ ಬಿಜೆಪಿಯೇ ನಗರದ ಆಡಳಿತ ಮಾಡಲು ಸಮರ್ಥರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಜನತೆಯ ತೀರ್ಮಾನವನ್ನು ಪ್ರಶ್ನಿಸಿಸುವ ಮೂಲಕ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ. ಕಾಂಗ್ರೆಸ್ ಸದಸ್ಯ ಎಂ. ವೆಂಕಪ್ಪ ಗೌಡರು ಬಿಜೆಪಿಯವರು ಏನೂ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರಿಗೆ ಜನಪರ ಕಾಳಜಿ ಇಲ್ಲ ಎನ್ನುತ್ತಿದ್ದಾರೆ. ಇದರಿಂದ ಜನತೆ ಕೊಟ್ಟ ತೀರ್ಮಾನವನ್ನು ಒಪ್ಪಲು ಅವರು ತಯಾರಿಲ್ಲ ಎಂದು ತಿಳಿಯುತಿದೆ. ಬಿಜೆಪಿಯವರಿಗೆ ನರೇಂದ್ರ ಮೋದಿಯೇ ಆದರ್ಶ. ಈ ಕಾರಣದಿಂದ ನಗರದ ಸಂಪೂರ್ಣ ಅಭಿವೃದ್ದಿಯನ್ನು ಮಾಡಲು ಬಿಜೆಪಿ ಬದ್ದವಾಗಿದೆ. ಇದಕ್ಕೆ ಎಲ್ಲ ಸದಸ್ಯರ ಸಹಕಾರ ಅಗತ್ಯ. ನಗರದ ಸಮಸ್ಯೆಗಳು ನಿರಂತರವಾಗಿದೆ ಕಾಲಕಾಲಕ್ಕೆ ಪರಿಹಾರ ನೀಡುತ್ತೇವೆ. ಆದರೆ ಕಾಂಗ್ರೆಸ್ ಪಕ್ಷ ರಚನಾತ್ಮಕ ವಿರೋಧಪಕ್ಷವಾಗಿರದೇ ಪ್ರಚಾರಕ್ಕಾಗಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ. ಇದನ್ನು ದಿಟ್ಟವಾಗಿ ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಹೇಳಿದರು. ಉಸ್ತುವಾರಿ ಸಚಿವರು ಬಂದು ಮಾಡಿದ ಸಭೆಗೆ ಬಿಜೆಪಿ ಸದಸ್ಯರು ಬರಲಿಲ್ಲ ಎನ್ನುವ ಆರೋಪ ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿಯ ಸದಸ್ಯರಿಗೆ ಮಾಹಿತಿ ನೀಡಬೇಕಿತ್ತು. ಸಚಿವರು ಉಸ್ತುವಾರಿ ಸಚಿವರಾಗಿ ಬಂದಿಲ್ಲ. ಕಾಂಗ್ರೆಸ್ ಪ್ರತಿನಿಧಿಯಾಗಿ ಬಂದಿದ್ದಾರೆ ಎಂದ ಅವರು ಒಳಚರಂಡಿ ಸಮಸ್ಯೆಯ ಬಗ್ಗೆ ವೆಂಕಪ್ಪ ಗೌಡರು ಪದೇ ಪದೇ ಪ್ರಸ್ತಾಪ ಮಾಡುತ್ತಾರೆ. ಅವರೇ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಒಳಚರಂಡಿ ಯೋಜನೆ ಆಗಿದೆ. ಈ ಸಮಯದಲ್ಲಿ ಅವರು ಏನೂ ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ನಗರದಲ್ಲಿ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರೇ ಈಗ ಮಾತನಾಡುತ್ತಿದ್ದಾರೆ. ಒಳಚರಂಡಿ ಯೋಜನೆಯನ್ನು ಮುಂದಿನ ಹಂತಗಳಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇವೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ಹೇಳಿದರು.

Advertisement

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಆದರೂ ಸರಕಾರ ವಿಳಂಬ ಮಾಡುತ್ತಿದೆ. ಇದರಿಂದ ನಗರದ ಅಭಿವೃದ್ದಿ ಕುಂಠಿತವಾಗಲಿದೆ. ಸರ್ಕಾರದ ಮೇಲೆ ಒತ್ತಡ ಹೇರಿ ನಗರಕ್ಕೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ಬೇಗನೇ ಅವಕಾಶ ಮಾಡಿ ಕೊಡುವ ಕೆಲಸವನ್ನು ಕಾಂಗ್ರೆಸ್‍ನವರು ಮಾಡಲಿ, ಒಳ್ಳೆಯ ಆಡಳಿತ ನಡೆಸಲು ತಮ್ಮ ಸಹಕಾರ ಕೊಡಿ. ಪ್ರಚಾರಕ್ಕೋಸ್ಕರ ಟೀಕೆ ಮಾಡದೇ ರಚನಾತ್ಮಕ ಸಲಹೆಗಳನ್ನು ಕೊಡಿ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಪಿ.ಕೆ.ಉಮೇಶ್, ಶೀನಪ್ಪ ಬಯಂಬು, ಸೋಮನಾಥ ಪೂಜಾರಿ, ಹರೀಶ್ ಬೂಡುಪನ್ನೇ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror