ಪ್ರತಿಭಟನಾ ಸಭೆಯಲ್ಲಿ ಸೈನಿಕರಿಗೆ ಅವಮಾನ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು – ಎಸ್ ಡಿ ಪಿ ಐ

September 21, 2019
6:12 PM

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.

Advertisement
Advertisement
Advertisement
Advertisement

ಕೇಂದ್ರ ಸರಕಾರ ಕಾಶ್ಮೀರದ ವಿಶೇಷ  ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ  ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror