ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.
ಕೇಂದ್ರ ಸರಕಾರ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…