ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ ಟೆಸ್ಟ್ನಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿದೆ.
ಏಳು ವಿಕೆಟ್ ಗೆ 502 ರನ್ ಗಳಿಸಿ ಭಾರತ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ದಿನದ ಆಟದ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೊಸ ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಪ್ರಥಮ ದಿನ ಪೂರ್ತಿ ಆಡಿ 59.1 ಓವರ್ಗಳಲ್ಲಿ 202ರನ್ ಗಳಿಸಿದ್ದರು. ರೋಹಿತ್ ಶರ್ಮ115 ರನ್, ಮಯಾಂಕ್ 84 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.
ಗುರುವಾರ ಆಟ ಮುಂದುವರಿಸಿದ ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 317 ರನ್ ಗಳಿಸಿತು. ಈ ಮೂಲಕ 2004ರಲ್ಲಿ ಕಾನ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿದ್ದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಗಳಿಸಿದ್ದ 218 ರನ್ಗಳ ದಾಖಲೆಯನ್ನು ಮುರಿದರು. ಅದೇ ರೀತಿ 300ಕ್ಕೂ ಹೆಚ್ಚು ರನ್ ಜೊತೆಯಾಟ ನೀಡಿದ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಆರಂಭಿಕನಾಗಿ ಬ್ಯಾಟ್ ಮಾಡಲು ಕಣಕ್ಕೆ ಇಳಿದ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರ ಮೊದಲ ದ್ವಿಶತಕ ಇದಾಗಿದ್ದು 371 ಬಾಲ್ಗಳಲ್ಲಿ 22 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 215 ರನ್ ಗಳಿಸಿದರು. ರೋಹಿತ್ ಶರ್ಮಾ 244 ಬಾಲ್ ಗಳಲ್ಲಿ 23 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 176 ರನ್ ಗಳಿಸಿ ಔಟಾದರು. ಇನ್ನುಳಿದಂತೆ ಚೇತೇಶ್ವರ್ ಪೂಜಾರಿ 6 ರನ್, ವಿರಾಟ್ ಕೊಹ್ಲಿ 20, ಅಜಿಂಕ್ಯ ರಹಾನೆ 15, ಹನುಮ ವಿಹಾರಿ 10, ವೃದ್ಧಿಮಾನ್ ಸಾಹಾ 21 ರನ್ ಗಳಿಸಿ ಔಟಾದರು. ರವೀಂದ್ರ ಜಡೇಜಾ (30), ರವಿಚಂದ್ರನ್ ಅಶ್ವಿನ್ (1) ಔಟಾಗದೆ ಉಳಿದರು.
ಮೊದಲ ಇನ್ನಿಂಗ್ಸ್ ಆರಂಭಿಸಿದ ದ.ಆಫ್ರಿಕಾ ಎರಡನೇ ದಿನದ ಅಂತ್ಯಕ್ಕೆ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 39 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಪಡೆದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…