ಮಂಗಳೂರು: ಕೇಂದ್ರ ಸರಕಾದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55 ರಿಂದ ರೂ.200 ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000 ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ 50% ಪಾಲಿನ ಮೊತ್ತವನ್ನು ಕೇಂದ್ರ ಸರಕಾರ ಪಾವತಿಸುತ್ತದೆ. ಪಿಂಚಣಿಯನ್ನು ಪಾವತಿಸುವ ಜವಾಬ್ದಾರಿ ಎಲ್.ಐ.ಸಿ.ಯದ್ದಾಗಿರುತ್ತದೆ.
ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ವೃದ್ಧಾಪ್ಯ ಪಿಂಚಣಿ ಯೋಜನೆಯು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದರಿ ಯೋಜನೆಯ ಲಾಭವನ್ನು ಪಡೆಯಲು ಕೋರಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಉಚಿತವಾಗಿ ದಾಖಲಾತಿ ಮಾಡುವ ಮೂಲಕ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ , ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…