ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.
ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…