ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳಿಗೆ ಅಭಿನಂದನೆ:
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು .
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು . ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು . 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು . ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಹೇಳಿದರು.ಡೆಂಘೆ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ .ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…