ಸುಳ್ಯ: ದ.ಕ.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಕೃಷಿಕರನ್ನು ಸನ್ಮಾನಿಸಲಾಯಿತು.
ಆತ್ಮಯೋಜನೆಯಡಿ 2017-18 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಗೋವಿಂದರಾಜ್ ಭಾರದ್ವಾಜ್, 2018-19ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಪ್ರಶಸ್ತಿ ಪಡೆದ ಪುರುಷೋತ್ತಮ ಗೌಡ, ತಾಲೂಕು ಮಟ್ಟದಲ್ಲಿ ಶ್ರೇಷ್ಠ ಮಟ್ಟದ ಕೃಷಿಕರಾದ ಪ್ರಶಸ್ತಿ ಬೆಳ್ಯಪ್ಪ ಮುಡೂರು, ಈಶ್ವರಪ್ಪ ಗೌಡ, 2017-18ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆದ ರವಿಶಂಕರ್, ದ್ವಿತೀಯ ಸ್ಥಾನ ಪಡೆದ ರಾಜೇಶ್ ಪಡ್ಪು, ತೃತೀಯ ಸ್ಥಾನ ಪಡೆದ ಹೇಮಾವತಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…