ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ. 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…