ಬೆಳ್ಳಾರೆ: ನಮ್ಮ ಜೀವಿತಾವಧಿಯಲ್ಲಿ ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ನಾವೆಲ್ಲರೂ ಭಾಜನರಾಗೋಣ. ರೋಟರಿಯು ವಿದ್ಯಾರ್ಥಿಗಳ ಸಬಲೀಕರಣಕ್ಕೆ ಉನ್ನತಮಟ್ಟದಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಕೈಜೋಡಿಸುತ್ತಿರುವ ಸದಾಶಿವ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವ ಅಭಿನಂದನಾರ್ಹ ಎಂದು ರೋಟರಿ ಜಿಲ್ಲಾ 3181ರ ಟಿ.ಇ.ಎ.ಚಿ.ಹೆಚ್ ಜಿಲ್ಲಾ ಚೇರ್ಮನ್ ರಾಮಕೃಷ್ಣ ಮಲ್ಲಾರ ಹೇಳಿದರು.
ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಹಾಗು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಬೆಳ್ಳಾರೆ ಕೆಪಿಎಸ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ.ನರಸಿಂಹ ಜೋಶಿ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಮಕ್ಕಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿದರು. ವೇದಿಕೆಯಲ್ಲಿ ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ, ಡಾ| ಶ್ರೇಯಸ್ ಭಾರಧ್ವಾಜ್ ಉಪಸ್ಥಿತರಿದ್ದರು. ಬಿ. ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಶ್ರೀರಾಮ್ ಪಾಟಾಜೆ ವಂದಿಸಿದರು. ಉಪನ್ಯಾಸಕ ರಾಮಚಂದ್ರ ಮುಗುಳಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅರ್ಹ 60 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಿತರಿಸಿದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…