ಸುಳ್ಯ: ಸೆ.1ರಿಂದ ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಅಭಿಯಾನ ನಗರದಲ್ಲಿ ನಡೆಯಿತು. ಸುಳ್ಯ ಹಳೆಗೇಟ್ ಭಾರತ್ ಪೆಟ್ರೋಲ್ ಪಂಪ್ ಬಳಿಯಿಂದ ಗಾಂಧೀನಗರ ಪೆಟ್ರೋಲ್ ಪಂಪ್ ವರೆಗೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ನ ಸಹಭಾಗಿತ್ವದಲ್ಲಿ ಜಾಗೃತಿ ಜಾಥಾ ನಡೆಯಿತು. ಪ್ಲಾಸ್ಟಿಕ್ ನಿಷೇಧ ಜಾರಿ ಮಾಡುವ ಹಿನ್ನಲೆಯಲ್ಲಿ ವರ್ತಕರು ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸುಳ್ಯ ವರ್ತಕರ ಸಂಘ, ಸ್ವಚ್ಚ ನಗರ ಸುಳ್ಯ ತಂಡ, ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಇನ್ನರ್ ವೀಲ್ ಕ್ಲಬ್, ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವ ರೆಡ್ ಕ್ರಾಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ಎನ್.ಎಸ್.ಎಸ್ ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಆಂದೋಲನ ನಡೆಯಿತು.
ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ನ.ಪಂ.ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ ಕುರುಂಜಿಭಾಗ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಬಾಲಕೃಷ್ಣ ಭಟ್, ಶಶಿಕಲಾ ನೀರಬಿದಿರೆ, ಶೀಲಾ ಅರುಣ ಕುರುಂಜಿ, ವಾಣಿಶ್ರೀ, ಸುಶೀಲಾ ಜಿನ್ನಪ್ಪ, ಪೂಜಿತಾ ಕೆ.ಯು, ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಕ.ಸಾ.ಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಪ್ರಮುಖರಾದ ಡಾ.ಬಿ.ಎನ್.ಶ್ರೀಕೃಷ್ಷ, ಅಶೋಕ್ ಎಡಮಲೆ, ಕೆ.ಎಲ್.ಪ್ರದೀಪ್ ಕುಮಾರ್, ಡಿ.ಎಸ್.ಗಿರೀಶ್, ಕೆ.ಆರ್.ಮನಮೋಹನ, ಭೀಮರಾವ್ ವಾಸ್ಟರ್, ಮಲ್ಲೇಶ್ ಬೆಟ್ಟಂಪಾಡಿ, ಸಂಜೀವ ಕುದ್ಪಾಜೆ, ಡಾ.ಅನುರಾಧಾ ಕುರುಂಜಿ, ಡಾ.ಕೆ.ಜಿ.ಪುರುಷೋತ್ತಮ, ಹರ್ಷಿತಾ ಪುರುಷೋತ್ತಮ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ, ವಿಖ್ಯಾತ್ ಬಾರ್ಪಣೆ, ರಫೀಕ್ ಪಡು ಮತ್ತಿತರರು ಭಾಗವಹಿಸಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…