ಸುಳ್ಯ: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗು ರಾಷ್ಟ್ರೀಯ ಪೌರತ್ವ ನೋಂದಾವಣೆ ಕುರಿತು ಮಾಹಿತಿ ಶಿಬಿರವನ್ನು ಮಂಗಳೂರು ಕುಲಶೇಖರ ಕುರ್ಡೆಲ್ ಚರ್ಚ್ ಸಭಾಂಗಣದಲ್ಲಿ ಫೆ.6 ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿ ಬ್ಲಾಕ್ ನಿಂದ 100 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಮೇಶ್ ಕುಮಾರ್, ಬಿ.ಎಲ್ ಶಂಕರ್ ,ಭವ್ಯ ನರಸಿಂಹ ಮೂರ್ತಿ ಮಾಹಿತಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.30 ರಿಂದ 1.30ರ ತನಕ ಕಾರ್ಯಾಗಾರ ನಡೆಯಲಿದ್ದು
ಪೌರತ್ವ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಜನರಿಗೆ ಕಾಯಿದೆಯಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ದೇಶದ ಕಾನೂನು, ಕಾಯಿದೆಗಳು ಮತ ಪಡೆಯುವ ದೃಷ್ಟಿಯಿಂದ ಆಗಬಾರದು ಮತ್ತು ಧಾರ್ಮಿಕ ನೆಲೆಯ ಆಧಾರದಲ್ಲಿ ರೂಪಿತವಾಗಬಾರದು. ಹಾಗಾದರೆ ಅದು ದೇಶದ ಭವಿಷ್ಯಕ್ಕೆ ಅಪಾಯಕಾರಿ. ಈ ರೀತಿಯ ಬೆಳವಣಿಗೆಯಿಂದ ದೇಶದಲ್ಲಿ ಸಂಘರ್ಷಕ್ಕೆ ಕಾರಣವಾಗಬಹುದು. ಆದುದರಿಂದ ಕಾಯಿದೆಗಳು ದೇಶದ ಭವಿಷ್ಯಕ್ಕೆ ಮತ್ತು ಜನರ ಭಾವನೆಗಳಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ನಂದರಾಜ ಸಂಕೇಶ, ಪರಮೇಶ್ವರ ಕೆಂಬಾರೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…