ಫೆ.1: ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಬಿಎಸ್‍ಇ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ

February 1, 2020
7:16 AM

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನೆಹರೂ ನಗರದ ಕ್ಯಾಂಪಸ್‍ನಲ್ಲಿ 2020-21ನೇ ಸಾಲಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸಿಬಿಎಸ್‍ಇ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಫೆ.1 ರಂದು ಬೆಳಗ್ಗೆ 7.15ಕ್ಕೆ ನಡೆಯಲಿದೆ. ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಆಡಳಿತ ಮಂಡಳಿಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement
Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ: 1915 ರಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಶಿಶುಮಂದಿರಗಳಿಂದ ತೊಡಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜು, ಬಿಎಡ್ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಕೇಂದ್ರ, ಕಾನೂನು ಕಾಲೇಜು, ಇಂಜಿನಿಯರಿಂಗ್ ಹಾಗೂ ಎಂ.ಬಿ.ಎ ಕಾಲೇಜು ಹೀಗೆ ನಾನಾ ವೈವಿಧ್ಯಮಯ ವಿದ್ಯಾಸಂಸ್ಥೆಗಳನ್ನು ನಡೆಸುವುದರ ಮೂಲಕ ಹೆಸರುವಾಸಿಯಾಗಿದೆ.

Advertisement

ಕೇವಲ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲದೆ ಸುಮಾರು ಮೂವತ್ತಾರು ಗ್ರಾಮಗಳಲ್ಲಿ ಗ್ರಾಮವಿಕಾಸ ಚಟುವಟಿಕೆಗಳು, ಐಎಎಸ್, ಐಪಿಎಸ್ ನಂತಹ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ನಾಗರಿಕ ಸೇವಾ ತರಬೇತಿ ಸಂಸ್ಥೆ ಯಶಸ್, ವಿವೇಕಾನಂದ ಧ್ಯಾನ ಮಂದಿರ, ವಿವೇಕಾನಂದ ಆಯುರ್ವೇದ ಆಸ್ಪತ್ರೆ ಹೀಗೆ ಸಾಕಷ್ಟು ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಇದೀಗ ವಿವೇಕಾನಂದ ವಿದ್ಯಾವರ್ಧಕ ಸಂಘದ 69ನೆಯ ಸಂಸ್ಥೆಯಾಗಿ ನುರಿತ ತಜ್ಞ ಶಿಕ್ಷಕರು, ಆಧುನಿಕ ಸೌಲಭ್ಯಗಳು ಹಾಗೂ ಸುಸಜ್ಜಿತ ವ್ಯವಸ್ಥೆಯುಳ್ಳ ಸಿಬಿಎಸ್‍ಇ ಸಂಸ್ಥೆ ಸೇರಿಕೊಳ್ಳುತ್ತಿದೆ.
ಸಿಬಿಎಇ ಸಂಸ್ಥೆ: ಈಗ ಆರಂಭಿಸಲು ಉದ್ದೇಶಿಸಲಾಗಿರುವ ಈ ಸಂಸ್ಥೆ 2020-21ನೆ ಶೈಕ್ಷಣಿಕ ಸಾಲಿನಿಂದಲೇ ಕಾರ್ಯ ಆರಂಭಿಸಲಿದೆ. ಎಲ್.ಕೆ.ಜಿ ಯಿಂದ ತೊಡಗಿ ಏಳನೆಯ ತರಗತಿಯವರೆಗೆ ಯಾವುದೇ ತರಗತಿಗೂ ವಿದ್ಯಾರ್ಥಿಗಳು ಬಂದು ಸೇರಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror