ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನೆಹರೂ ನಗರದ ಕ್ಯಾಂಪಸ್‍ನಲ್ಲಿ 2020-21ನೇ ಸಾಲಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸಿಬಿಎಸ್‍ಇ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಫೆ.1 ರಂದು ಬೆಳಗ್ಗೆ 7.15ಕ್ಕೆ ನಡೆಯಲಿದೆ. ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಆಡಳಿತ ಮಂಡಳಿಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ: 1915 ರಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಶಿಶುಮಂದಿರಗಳಿಂದ ತೊಡಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜು, ಬಿಎಡ್ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಕೇಂದ್ರ, ಕಾನೂನು ಕಾಲೇಜು, ಇಂಜಿನಿಯರಿಂಗ್ ಹಾಗೂ ಎಂ.ಬಿ.ಎ ಕಾಲೇಜು ಹೀಗೆ ನಾನಾ ವೈವಿಧ್ಯಮಯ ವಿದ್ಯಾಸಂಸ್ಥೆಗಳನ್ನು ನಡೆಸುವುದರ ಮೂಲಕ ಹೆಸರುವಾಸಿಯಾಗಿದೆ.
ಕೇವಲ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲದೆ ಸುಮಾರು ಮೂವತ್ತಾರು ಗ್ರಾಮಗಳಲ್ಲಿ ಗ್ರಾಮವಿಕಾಸ ಚಟುವಟಿಕೆಗಳು, ಐಎಎಸ್, ಐಪಿಎಸ್ ನಂತಹ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ನಾಗರಿಕ ಸೇವಾ ತರಬೇತಿ ಸಂಸ್ಥೆ ಯಶಸ್, ವಿವೇಕಾನಂದ ಧ್ಯಾನ ಮಂದಿರ, ವಿವೇಕಾನಂದ ಆಯುರ್ವೇದ ಆಸ್ಪತ್ರೆ ಹೀಗೆ ಸಾಕಷ್ಟು ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಇದೀಗ ವಿವೇಕಾನಂದ ವಿದ್ಯಾವರ್ಧಕ ಸಂಘದ 69ನೆಯ ಸಂಸ್ಥೆಯಾಗಿ ನುರಿತ ತಜ್ಞ ಶಿಕ್ಷಕರು, ಆಧುನಿಕ ಸೌಲಭ್ಯಗಳು ಹಾಗೂ ಸುಸಜ್ಜಿತ ವ್ಯವಸ್ಥೆಯುಳ್ಳ ಸಿಬಿಎಸ್‍ಇ ಸಂಸ್ಥೆ ಸೇರಿಕೊಳ್ಳುತ್ತಿದೆ.
ಸಿಬಿಎಇ ಸಂಸ್ಥೆ: ಈಗ ಆರಂಭಿಸಲು ಉದ್ದೇಶಿಸಲಾಗಿರುವ ಈ ಸಂಸ್ಥೆ 2020-21ನೆ ಶೈಕ್ಷಣಿಕ ಸಾಲಿನಿಂದಲೇ ಕಾರ್ಯ ಆರಂಭಿಸಲಿದೆ. ಎಲ್.ಕೆ.ಜಿ ಯಿಂದ ತೊಡಗಿ ಏಳನೆಯ ತರಗತಿಯವರೆಗೆ ಯಾವುದೇ ತರಗತಿಗೂ ವಿದ್ಯಾರ್ಥಿಗಳು ಬಂದು ಸೇರಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.