ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಲೇಜು ಮತ್ತು ಆಳ್ವಾಸ್ ಕಾಲೇಜು ಮೂಡಬಿದಿರೆಯ ಇತಿಹಾಸ ವಿಭಾಗ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಮಂದಾರ ರಾಮಾಯಣ- ಇತಿಹಾಸ ಮತ್ತು ಸಂಸ್ಕೃತಿ ಶೋಧ” ಎಂಬ ಶೀರ್ಷಿಕೆಯ ಅಡಿಯಲ್ಲಿ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಫೆಬ್ರವರಿ 15 ರಂದು ಬೆಳಿಗ್ಗೆ 10.30 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದಿರೆಯ ಕುವೆಂಪು ಸಭಾಂಗಣ ವಿದ್ಯಾಗಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೋ.ಎ.ಎಂ.ಖಾನ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel