ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವತಿಯಿಂದ ಸುನಾದ ಸಂಗೀತೋತ್ಸವ ಫೆ.2 ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನೆಯ ಬಳಿಕ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಸಂಜೆ ಆರರಿಂದ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಲಿದೆ. ವಯಲಿನ್‍ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಲಿದ್ದಾರೆ. ಸಂಗೀತೋತ್ಸವದ ಪ್ರಯುಕ್ತ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸುನಾದ ಸಂಗೀತ ಕಲಾಶಾಲೆಯ ಪ್ರಕಟಣೆ ತಿಳಿಸಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…