ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ಸಹ ಸಂಸ್ಥೆಯಾದ ಇನ್ನರ್ ವ್ಹೀಲ್ ಕ್ಲಬ್ ನ ಬೆಳ್ಳಿ ಹಬ್ಬ ಆಚರಣೆ ಫೆ23 ರಂದು ರಥಬೀದಿಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ ರಜತ ವರ್ಷಾಚರಣೆ ಸಮಿತಿಯ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಪೊಲೀಸ್ ಟ್ರೈನಿಂಗ್ ಸ್ಕೂಲ್ ನ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ ಮುಖ್ಯ ಅತಿಥಿಯಾಗುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಇನ್ನರ್ ವ್ಹೀಲ್ ಜಿಲ್ಲಾಧ್ಯಕ್ಷೆ ಅನುರಾಧಾ ನಂದಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಜತ ವರ್ಷಾಚರಣೆಯ ಪ್ರಯುಕ್ತ ರಥಬೀದಿಯ ರೋಟರಿ ಶಾಲೆಯ ಸಮೀಪ ನಿರ್ಮಿಸಲಾಗಿರುವ ಬಸ್ ತಂಗುದಾಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಯಾಗುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ, ಕಾರ್ಯದರ್ಶಿ ಜಯಾಮಣಿ ಮಾಧವ, ಸುಮಂಗಲಾ ರವಿರಾಜ್, ಮೀನಾಕ್ಷಿ ಹೇಮನಾಥ್, ಮಮತಾ ಮುಕುಂದ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.