ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…