Advertisement
ಮಾಹಿತಿ

ಫೆ.27 ರಂದು ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ-ವಿಶೇಷ ಕಾರ್ಯಕ್ರಮ

Share

ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

28 minutes ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

6 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

7 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

14 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

22 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

24 hours ago