ಫೆ.29 ರಂದು ಪೆರಾಜೆ ಗ್ರಾಮ ಪಂಚಾಯಿತಿಯಲ್ಲಿ ಬಿ.ಜೆ.ಪಿ. ಆಡಳಿತದ ಬೆಳ್ಳಿ ವರ್ಷಾಚರಣೆ

February 24, 2020
9:32 PM

ಸುಳ್ಯ: ಪೆರಾಜೆ ಗ್ರಾಮ ಪಂಚಾಯಿತಿಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಿ ಬಂದ ಸದಸ್ಯರು ಕಳೆದ 25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು ಈ ಬಾರಿ ಬೆಳ್ಳಿ ವರ್ಷ ಕಾರ್ಯಕ್ರಮವನ್ನು ಫೆ.29ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ, ತಾ.ಪಂ.ಸದಸ್ಯ ನಾಗೇಶ್ ಕುಂದಲ್ಪಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫೆ.29ರಂದು ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಆರ್‍ಎಸ್‍ಎಸ್ ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಗೌರವಾರ್ಪಣೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಎಸ್.ಅಂಗಾರ, ಸುನಿಲ್ ಸುಬ್ರಮಣಿ, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಕಾಂಗೀರ ಸತೀಶ್, ಮಡಿಕೆರಿ ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಸದಸ್ಯ ನಾಗೇಶ್ ಕುಂದಲ್ಪಾಡಿ, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಎ.ಪಿ.ಎಂ.ಸಿ. ಉಪಾಧ್ಯಕ್ಷ ಅನಂತ ಎನ್.ಸಿ., ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಧರಣೀಧರ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಭಾಗವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಂಜಪ್ಪ ನಿಡ್ಯಮಲೆ, ಪ್ರವೀಣ್ ಮಜಿಕೋಡಿ, ನೆಕ್ಕಿಲ ಪ್ರಸನ್ನ, ಉದಯ ಕುಮಾರ್ ಕುಂಬಳಚೇರಿ, ಮಹೇಶ್ ಮೂಲೆಮಜಲು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror