ಸುಳ್ಯ: ಪೆರಾಜೆ ಗ್ರಾಮ ಪಂಚಾಯಿತಿಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಿ ಬಂದ ಸದಸ್ಯರು ಕಳೆದ 25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು ಈ ಬಾರಿ ಬೆಳ್ಳಿ ವರ್ಷ ಕಾರ್ಯಕ್ರಮವನ್ನು ಫೆ.29ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ, ತಾ.ಪಂ.ಸದಸ್ಯ ನಾಗೇಶ್ ಕುಂದಲ್ಪಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಫೆ.29ರಂದು ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಆರ್‍ಎಸ್‍ಎಸ್ ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಗೌರವಾರ್ಪಣೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಎಸ್.ಅಂಗಾರ, ಸುನಿಲ್ ಸುಬ್ರಮಣಿ, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಕಾಂಗೀರ ಸತೀಶ್, ಮಡಿಕೆರಿ ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಸದಸ್ಯ ನಾಗೇಶ್ ಕುಂದಲ್ಪಾಡಿ, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಎ.ಪಿ.ಎಂ.ಸಿ. ಉಪಾಧ್ಯಕ್ಷ ಅನಂತ ಎನ್.ಸಿ., ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಧರಣೀಧರ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಭಾಗವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಂಜಪ್ಪ ನಿಡ್ಯಮಲೆ, ಪ್ರವೀಣ್ ಮಜಿಕೋಡಿ, ನೆಕ್ಕಿಲ ಪ್ರಸನ್ನ, ಉದಯ ಕುಮಾರ್ ಕುಂಬಳಚೇರಿ, ಮಹೇಶ್ ಮೂಲೆಮಜಲು ಇದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?