ಸುಳ್ಯ: ಸಂಪಾಜೆಯ ಅರೆಕಲ್ಲು ಶ್ರೀ ಅಯ್ಯಪ್ಪ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಫೆ. 5ರಿಂದ 7ರ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಆರ್. ಶಿವರಾಮ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಪ್ರದೇಶದಲ್ಲಿರುವ ಈ ಕ್ಷೇತ್ರದಲ್ಲಿ ಪ್ರದಾನ ದೇವರಾದ ಅಯ್ಯಪ್ಪ, ವಿಷ್ಣುಮೂರ್ತಿ ನೈದ ಪಾಂಡಿ ಪೂವತ್ತಮಾರ್, ಪುರುಷರಾಯ ಮತ್ತು ತೇತ್ರಾಯುಗದಲ್ಲಿ ಋಷಿಮುನಿಗಳು ಪೂಜಿಸಲ್ಪಟ್ಟ ಸ್ವಯಂ ಉದ್ಭವವಾದ ಈಶ್ವರ ವಿಗ್ರಹ ಅಲ್ಲದೇ ಪರಿವಾರ ದೈವಗಳ ಆರಾಧನೆ ನಡೆಯುತಿದೆ. ಫೆ.5 ರಂದು ದೇವತಾ ಪ್ರಾಥನೆ, ವಾಸ್ತುಹೋಮ, ವಾಸ್ತುಬಲಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ ಭಜನೆ ಮತ್ತು ದುಡಿಕೊಟ್ಟ್ ಪಾಟ್ ಕಾರ್ಯಕ್ರಮ ನಡೆಯಲಿದೆ. ಫೆ.6 ರಂದು ಗಣಪತಿ ಹೋಮದ ಮೂಲಕ ಆರಂಭವಾಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪರಿಕಲಶ ಪೂಜೆ, ಬ್ರಹ್ಮಕಲಶ ಪೂಜೆ-ಮಹಾಪೂಜೆ ನಡೆಯಲಿದೆ. ಬಳಿಕ ಭಜನೆ, ದುಡಿಕೊಟ್ಟ್ ಪಾಟ್ ಕಾರ್ಯಕ್ರಮ ನಡೆಯಲಿದೆ.
ಫೆ. 7 ರಂದು ಬೆಳಿಗ್ಗೆ ಗಣಪತಿ ಹೋಮ ಬಳಿಕ ಶ್ರೀ ದೇವರ ಪ್ರತಿಷ್ಠೆ, ಪರಿವಾರ ದೇವರ ಪ್ರತಿಷ್ಠೆ, ಬ್ರಹ್ಮಕಲಾಭಿಷೇಕ ಪ್ರತಿಷ್ಠಾ ಬಲಿ, ಮಹಾಪೂಜೆ ನಡೆಯಲಿದೆ. ಮಧ್ಯಾಹ್ಮ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಸುಳ್ಯ ಶಾಸಕ ಎಸ್. ಅಂಗಾರ, ಕುಂಟಾರು ರವೀಶ ತಂತ್ರಿ, ಲೋಕಸೇವಾ ಆಯೋಗದ ನಿವೃತ್ತ ಆಯುಕ್ತ ಡಾ. ಟಿ. ಶ್ಯಾಮ್ ಭಟ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿವಪ್ಪ.ಕೆ.ಬಿ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಶ್ರೀಧರ ಭಟ್ ಬಿ.ಜೆ, ಕಾರ್ಯದರ್ಶಿ ಯಶೋಧರ ಬಿ.ಜೆ, ಕೋಶಾಧಿಕಾರಿ ಬಾಲಕೃಷ್ಣ ಡಿ.ಎಸ್, ಪುರುಷೋತ್ತಮ ಕೆ ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.