ಮಂಗಳೂರು: 2019-20 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು ಫೆಬ್ರವರಿ 7 ರಿಂದ 9ರ ವರೆಗೆ ಚಾಮರಾಜನಗರ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಸಂಘಟಿಸಲಾಗುವುದು.
ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾವಗೀತೆ, ಲಾವಣಿ, ರಂಗಗೀತೆ, ಏಕಪಾತ್ರಾಭಿನಯ, ಗೀಗೀಪದ, ಜಾನಪದ ಗೀತೆ, ಜಾನಪದ ನೃತ್ಯ, ಕೋಲಾಟ, ಭಜನೆ, ರಾಗಿ/ಜೋಳ ಬೀಸುವ ಪದ, ಸೋಬಾನೆ ಪದ (ಯುವತಿಯರಿಗೆ ಮಾತ್ರ), ವೀರಗಾಸೆ (ಯುವಕರಿಗೆ ಮಾತ್ರ), ಡೊಳ್ಳುಕುಣಿತ (ಯುವಕರಿಗೆ ಮಾತ್ರ), ದೊಡ್ಡಟ (ಯುವಕರಿಗೆ ಮಾತ್ರ), ಸಣ್ಣಾಟ (ಯುವಕರಿಗೆ ಮಾತ್ರ), ಯಕ್ಷಗಾನ (ಯುವಕರಿಗೆ ಮಾತ್ರ), ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತ ಸ್ಪರ್ಧಾಳುಗಳು ಫೆಬ್ರವರಿ 7 ರಂದು ಮಧ್ಯಾಹ್ನ 1 ಗಂಟೆಯ ಒಳಗಾಗಿ ಚಾಮರಾಜ ನಗರ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :0824-2451264 ನ್ನು ಸಂಪರ್ಕಿಸಲು ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…