ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ ಭಜನಾ ಸತ್ಸಂಗ ಸಮಾವೇಶ -2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆಯು ಫೆ.8 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ಸುಳ್ಯದಿಂದ 100 ಭಜನಾಮಂಡಳಿಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ತಾಲೂಕಿನಲ್ಲಿ 78 ಭಜನಾಮಂಡಳಿಗಳು ಭಜನಾ ಪರಿಷತ್‍ನಲ್ಲಿ ನೊಂದಾವಣೆ ಆಗಿದೆ. ಪರಿಷತ್‍ನಲ್ಲಿ ನೊಂದಾವಣೆ ಆಗಿರುವ ಮತ್ತು ಇತರ ಭಜನಾ ತಂಡಗಳು ಸೇರಿ ಒಟ್ಟು ಭಜನಾ ಮಂಡಳಿಗಳು ಭಾಗವಹಿಸಲಿದೆ. ಹೊಸತಾಗಿ ಹಲವೆಡೆ ಮಕ್ಕಳ ಭಜನಾ ತಂಡಗಳು ರಚನೆ ಆಗಿದೆ. ಮಕ್ಕಳ, ಮಹಿಳೆಯರ ಮತ್ತು ಪುರುಷರ ಭಜನಾ ತಂಡಗಳು ಇವೆ. ಭಜನಾ ಪರಿಷತ್ ವತಿಯಿಂದ ಭಜನಾ ತರಬೇತಿ ನಡೆಸಲಾಗುತ್ತದೆ. ಮನೆ ಮನೆಗಳಲ್ಲಿ ಭಜನೆ, ಮದುವೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಜನಾ ಪರಿಷತ್‍ನ ಕಾರ್ಯದರ್ಶಿ ಯತೀಶ್ ರೈ ದುಗಲಡ್ಕ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್‍ಕುಮಾರ್ ರೈ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…