ಫೆ.9 : ರಂಜನಿ ಸಂಗೀತ ಸಭಾ ದಶಮಾನೋತ್ಸವ ಸಮಾರೋಪ ಮತ್ತು ಸಂಗೀತ ಸಂಭ್ರಮ

February 6, 2020
10:05 AM

ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಲಿದೆ‌.

ಬೆಳಗ್ಗೆ 7.30ಕ್ಕೆ ದೀಪೋಜ್ವಲನ, ಗುರುವಂದನ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಗಾಯನ ನಡೆಯಲಿದೆ. ಸಂಜೆ 5ರಿಂದ ನಿವೃತ್ತ ಮುಖ್ಯ ಶಿಕ್ಷಕ ಪದ್ಯಾಣ ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಮತ್ತು ಗೌರವಾರ್ಪಣೆ ನಡೆಯಲಿದೆ. ಸುನಾದ ಸಂಗೀತ ಶಾಲೆಯ ಸಂಚಾಲಕ ವಿದ್ವಾನ್ ಕಾಂಚನ ಎ.ಈಶ್ವರ ಭಟ್, ವೈದಿಕ ವಿದ್ವಾಂಸ ವೇದ ಮೂರ್ತಿ ಕರುವಜೆ ಕೇಶವ ಜೋಯಿಸ, ಸಂಗೀತ ಕಲಾವಿದ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಕಾಸರಗೋಡು ಗೋಪಾಲಕೃಷ್ಣ ಸಂಗೀತ ವಿದ್ಯಾಲಯದ ನಿರ್ದೇಶಕ ಬಿ.ಜಿ.ಈಶ್ವರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಗಾಯತ್ರಿ ವೆಂಕಟರಾಘವನ್ ಸಂಗೀತ ಕಛೇರಿ:

ಸಭಾ ಕಾರ್ಯಕ್ರಮದ ಬಳಿಕ ಸಂಜೆ. 6 ರಿಂದ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror