ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಲಿದೆ.
ಬೆಳಗ್ಗೆ 7.30ಕ್ಕೆ ದೀಪೋಜ್ವಲನ, ಗುರುವಂದನ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಗಾಯನ ನಡೆಯಲಿದೆ. ಸಂಜೆ 5ರಿಂದ ನಿವೃತ್ತ ಮುಖ್ಯ ಶಿಕ್ಷಕ ಪದ್ಯಾಣ ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಮತ್ತು ಗೌರವಾರ್ಪಣೆ ನಡೆಯಲಿದೆ. ಸುನಾದ ಸಂಗೀತ ಶಾಲೆಯ ಸಂಚಾಲಕ ವಿದ್ವಾನ್ ಕಾಂಚನ ಎ.ಈಶ್ವರ ಭಟ್, ವೈದಿಕ ವಿದ್ವಾಂಸ ವೇದ ಮೂರ್ತಿ ಕರುವಜೆ ಕೇಶವ ಜೋಯಿಸ, ಸಂಗೀತ ಕಲಾವಿದ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಕಾಸರಗೋಡು ಗೋಪಾಲಕೃಷ್ಣ ಸಂಗೀತ ವಿದ್ಯಾಲಯದ ನಿರ್ದೇಶಕ ಬಿ.ಜಿ.ಈಶ್ವರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗಾಯತ್ರಿ ವೆಂಕಟರಾಘವನ್ ಸಂಗೀತ ಕಛೇರಿ:
ಸಭಾ ಕಾರ್ಯಕ್ರಮದ ಬಳಿಕ ಸಂಜೆ. 6 ರಿಂದ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…