“ಫೋನಿ” ಚಂಡಮಾರುತಕ್ಕೆ 5 ಬಲಿ

May 3, 2019
11:23 PM
ನವದೆಹಲಿ : ಒಡಿಸ್ಸಾದ ಸಮುದ್ರ ತೀರ ಪ್ರದೇಶಕ್ಕೆ ಗುರುವಾರ ಬೆಳಗ್ಗೆ ಅಪ್ಪಳಿಸಿದ  ಫೋನಿ ಚಂಡಮಾರುತ ಕೋಲಾಹಲ ಸೃಷ್ಠಿಸಿದೆ. ಶುಕ್ರವಾರ ಸಂಜೆಯ ವೇಳೆ ಒಟ್ಟು 5 ಮಂದಿ  ಫೋನಿ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಗ್ಗೆ ಪ್ರತಿ ಗಂಟೆಗೆ 200 ಕಿ. ಮೀ ವೇಗದಲ್ಲಿ ಪುರಿ ಪ್ರದೇಶದ  ಕಡಲ ತೀರಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ಮಧ್ಯಾಹ್ನದವರೆಗೂ ಒಡಿಶಾ ಕರಾವಳಿ ತೀರದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯನ್ನು ಸುರಿಸಿತು.  ನಂತರ ಇದೀಗ  ಚಂಡಮಾರುತ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ.  ಸದ್ಯ ಪ್ರತೀ ಗಂಟೆಗೆ 150-160 ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಸದ್ಯ ಗಂಟೆಗೆ 80 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಾ ಈಶಾನ್ಯದತ್ತ ಚಂಡ ಮಾರುತದ ಪ್ರಭಾವ ಸಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಪೀಡಿತ ರಾಜ್ಯಗಳಿಗೆ ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror