ಭುವನೇಶ್ವರ: ಫೋನಿ ಚಂಡಮಾರುತದ ಪ್ರಭಾವದಿಂದ ಒಡಿಸ್ಸಾದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅದರ ಜೊತೆಗ ಪಶ್ಚಿಮ ಬಂಗಾಲ, ಜಾರ್ಖಂಡ್, ಆಂದ್ರಪ್ರದೇಶ ಸಹಿತ ಕರಾವಳಿ ತೀರದ ಪ್ರದೇಶದಲ್ಲಿ ವಿಪರೀತ ಹಾನಿಯಾಗಿದೆ. ಈಗಾಗಲೇ ಆಯಾ ರಾಜ್ಯದ ಸರಕಾರಗಳು ಸಾಕಷ್ಟು ಕ್ರಮ ಕೈಗೊಂಡಿವೆ. ಇದೀಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿಲಿದ್ದಾರೆ.
ಫೋನಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಒಡಿಸ್ಸಾದ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಬಂಗಾಳದಲ್ಲೂ ಹಲವು ಮನೆಗಳು ಧ್ವಂಸವಾಗಿವೆ. ಮುಂಜಾಗ್ರತಾ ಕ್ರಮವಾಗಿ 35 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ಹೊರಡುವ 79 ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಡಿಸ್ಸಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಸಮೀಕ್ಷೆ ನಡೆಸುವರು.
ಈ ನಡುವೆ ಫೋನಿ ಚಂಡಮಾರುತ ಸಂಬಂಧ ಭಾರತ ಕೈಗೊಂಡ ಸೂಕ್ತ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿಶ್ವಸಂಸ್ಥೆಯ ಮೆಚ್ಚುಗೆ ವ್ಯಕ್ತಪಡಿಸಿದೆ. ಭಾರತ ಮತ್ತು ಚಂಡಮಾರುತ ಪೀಡಿತ ರಾಜ್ಯಗಳು ಕೈಗೊಂಡ ಸೂಕ್ತ ಮುಂಜಾಗ್ರತಾ ಕ್ರಮಗಳಿಂದಾಗಿ ಭಾರತದಲ್ಲಿ ಪ್ರಾಣಹಾನಿ ಕಡಿಮೆಯಾಗಿತ್ತು. ಇದೇ ಕಾರಣಕ್ಕಾಗಿ ವಿಶ್ವಸಂಸ್ಥೆ ಭಾರತವನ್ನು ಶ್ಲಾಘಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement