ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಭಾರತದ ದಿರಾಗ್ ಶೆಟ್ಟಿ- ಸಾತ್ವಿಕ್ ರಾಜ್ ರಂಕಿರೆಡ್ಡಿ ಜೋಡಿ ಅಚ್ಚರಿಯ ಜಯ ಸಾಧಿಸಿ ಫೈನಲ್‌ಗೆ ಮುನ್ನಡೆದಿದೆ.
ಭಾರತೀಯ ಜೋಡಿ ಜಪಾನ್‌ನ ಹಿರೊಯುಕಿ ಎಂಡೊ ಮತ್ತು ಯುತಾ ವಟಾನಬ್ ಜೋಡಿಯನ್ನು 21-11, 25-23 ಅಂತರದಲ್ಲಿ ಸೆಮಿಫೈನಲ್‌ನಲ್ಲಿ ಮಣಿಸಿ ಫೈನಲ್‌ಗೆ ಅರ್ಹತೆ ಪಡೆಯಿತು.
ಮೊದಲ ಸೆಟ್‌ನಲ್ಲಿ ಸುಲಭವಾಗಿ ಗೆದ್ದ ಭಾರತೀಯ ಜೋಡಿ ಗೆಲುವಿನ ಓಟ ಮುಂದುವರಿಸಿ 49 ನಿಮಿಷಗಳಲ್ಲಿ ಪಂದ್ಯ ಗೆದ್ದಿತು. ಶುಕ್ರವಾರ ಭಾರತದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್ ಇಬ್ಬರೂ ಕ್ವಾರ್ಟರ್ ಫೈನಲ್ ಹಂತದಲ್ಲಿ ನಿರ್ಗಮಿಸಿದ್ದರು. ಭಾರತದ ಕಿಡಂಬಿ ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಥೈವಾನ್‌ನ ಚೊವ್ ತೀನ್ ಚೆನ್‌ಗೆ ಸೋತು ಹೊರ ನಡೆದಿದ್ದರು. ಭಾರತದ ಮತ್ತೊಬ್ಬ ಆಟಗಾರ ಪರುಪಳ್ಳಿ ಕಶ್ಯಪ್ ಅವರು ಹಾಂಕಾಂಗ್‌ನ ಎನ್‌ಜಿ ಕಾ ಲಾಂಗ್ ಅಂಗಸ್ ವಿರುದ್ಧ 11-21, 9-21 ಅಂತರದಿಂದ ಸೋತಿದ್ದರು.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…