ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
78 ವರ್ಷದ ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.
ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.
ರಾಜ್ಯದಲ್ಲಿ ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ ಹಾಗೂ ಬಂಟ್ವಾಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…