ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು ಹಾಗೂ ಅಂಗಡಿಯ ಎದುರು ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.
ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…