ಬೆಂಗಳೂರು: ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48) ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಅವರು ವಿವಿಧ ಹೋರಾಟಗಳಲ್ಲಿ, ಹಿಂದೂಪರವಾದ ಧರಣಿ, ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಅದಾದ ನಂತರ 2008 ರಲ್ಲಿ ಸಂಘಪರಿವಾರದಿಂದ ಹೊರಬಂದಿದ್ದರು. ಬಳಿಕ 2011 ರಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದರು. ವಿವಿಧ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ಈಚೆಗೆ ಸಿ ಎ ಎ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿದ್ದರು.
ಚಿಕ್ಕಮಗಳೂರಿನ ಕೊಪ್ಪದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…